ಎವರೆಸ್ಟ್ ಚಿಕನ್ ಮಸಾಲಾ ನಿಷೇದಕ್ಕೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ
ಉತ್ತರ ಕನ್ನಡ: ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಹೆಚ್ಚಾಗಿರುವುದರಿಂದ ಇದನ್ನು ಬಳಸದಂತೆ ಅಧಿಕಾರಿಗಳಿಂದ ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಸೂಚನೆ ನೀಡಿದ್ದಾರೆ. ಮೆಣಸಿನಪುಡಿಗೆ ಬಳಸುವ ಕೀಟನಾಶಕ ಎಥಿಲಿನ್ ಆಕ್ಸೈಡ್ ಪ್ರಮಾಣ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಹೆಚ್ಚಾಗಿದೆ. ಮಸಲಾ ಪದಾರ್ಥದಲ್ಲಿ ಎಥಿಲಿನ್ ಆಕ್ಸೈಡ್ ಪ್ರಮಾಣ ಕೇವಲ ಶೇ.0.01ರಷ್ಟು ಇರಬೇಕು. ಆದರೆ ಎವರೆಸ್ಟ್ ಚಿಕನ್ ಮಸಾಲಾದಲ್ಲಿ ಶೇ.3.93ರಷ್ಟು ಪ್ರಮಾಣದಲ್ಲಿದೆ. ಇಷ್ಟೊಂದು ಪ್ರಮಾಣದಲ್ಲಿ ಎಥಿಲಿನ್ ಆಕ್ಸೈಡ್ ಬಳಕೆ ಹಾನಿಕಾರಕ. ಇದು ಆರೋಗ್ಯದ ಮೇಲೆ ಪರಿಣಾಮ ಆಗಿಯೇ ಆಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲೆ ಆಹಾರ ಸುರಕ್ಷತಾ ಅಧಿಕಾರಿ ರಾಜಶೇಖರ್ ಹೇಳಿದರು.
ಎವರೆಸ್ಟ್ ಚಿಕನ್ ಮಸಾಲಾ ಬಗ್ಗೆ ನಮಗೆ ಅನುಮಾನ ಇದ್ದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಆಯುಕ್ತರ ಸೂಚನೆ ಮೇರೆಗೆ ಪರೀಕ್ಷೆ ಮಾಡಿದೆವು. ಆಗ ಶೇ.3.92ರಷ್ಟು ಕೀಟನಾಶಕ ಎಥಿಲಿನ್ ಆಕ್ಸೈಡ್ ಪ್ರಮಾಣ ಇರುವುದು ತಿಳಿಯಿತು. ಹೀಗಾಗಿ ಇದನ್ನು ಸಾರ್ವಜನಿಕರು ಬಳಸಬಾರು ಎಂದರು.