ಪ್ರಮುಖ ಸುದ್ದಿ
ಏ.17 ರಂದು ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆ, ಅಂದೇ ರಾಜ್ಯಧ್ಯಕ್ಷ ಪಟ್ಟ.!
ಸಿ.ಎಂ.ಇಬ್ರಾಹಿಂಗೆ ಜೆಡಿಎಸ್ ರಾಜ್ಯಧ್ಯಕ್ಷ ಪಟ್ಟ
ಏ.17 ರಂದು ಸಿ.ಎಂ.ಇಬ್ರಾಹಿಂ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆ, ಅಂದೇ ರಾಜ್ಯಧ್ಯಕ್ಷ ಪಟ್ಟ.!
ಬೆಂಗಳೂರಃ ಕೇಂದ್ರದ ಮಾಜಿ ಸಚಿವ ಸಿದ್ರಾಮಯ್ಯ ನವರ ಆಪ್ತ ಸಿ.ಎಂ.ಇಬ್ರಾಹಿಂ ಅವರು ಇದೇ ಏ.17 ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ ಮತ್ತು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ.
ಈಗಾಗಲೇ ಕಾಂಗ್ರೆಸ್ ತೊರೆದಿರುವ ಸಿ.ಎಂ.ಇಬ್ರಾಹಿಂ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಜೆಡಿಎಸ್ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.
ಎ.17 ರಂದು ನಡೆಯುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿಯೇ ಜೆಡಿಎಸ್ ರಾಜ್ಯಧ್ಯಕ್ಷ ಪಟ್ಟ ಕಟ್ಟುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ ಅಂದೇ ಪಕ್ಷದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರವು ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.