ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಸುವುದು ಕಡ್ಡಾಯ!

ಬೆಂಗಳೂರು: ಕರ್ನಾಟಕದ ಮದರಸಾಗಳಲ್ಲಿ ಉರ್ದುವಿನಲ್ಲೇ ಬೋಧನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಕನ್ನಡ ಕಲಿಕೆಗೂ (Kannada In Madrasa) ರಾಜ್ಯ ಸರ್ಕಾರವು (Karnataka Government) ಪ್ರಾಮುಖ್ಯತೆ ನೀಡಲು ಮುಂದಾಗಿದೆ. ಇನ್ನುಮುಂದೆ ರಾಜ್ಯದ ಮದರಸಾಗಳಲ್ಲಿ (Madrasas In Karnataka) ಕಡ್ಡಾಯವಾಗಿ ಕನ್ನಡದಲ್ಲೇ ಬೋಧನೆ ಮಾಡಬೇಕು ಎಂಬ ದಿಸೆಯಲ್ಲಿ ಆದೇಶ ಹೊರಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹೊಸ ಯೋಜನೆ ರೂಪಿಸಿದೆ. ಈ ಕುರಿತಂತೆ ಕನ್ನಡ ಕಡ್ಡಾಯಗೊಳಿಸಿ ಶೀಘ್ರದಲ್ಲೇ ಆದೇಶ ಹೊರಡಿಸಲಾಗುತ್ತದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ಸಾವಿರಾರು ಮದರಸಾಗಳಿದ್ದು, ಮುಸ್ಲಿಂ ವಿದ್ಯಾರ್ಥಿಗಳಿಗೆ ಬೋಧಕರು ಕನ್ನಡದಲ್ಲಿ ಪಾಠ ಮಾಡಲು, ಕನ್ನಡ ಕಲಿಸಲು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕಾಗಿಯೇ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹೊಸ ಯೋಜನೆ ರೂಪಿಸಿದೆ. ಕನ್ನಡದಲ್ಲೇ ಪಾಠ ಮಾಡಬೇಕು. ವಾರದಲ್ಲಿ ಕನಿಷ್ಠ 2-3 ಗಂಟೆ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿಯೇ ಬೋಧನೆ ಮಾಡಬೇಕು. ಆ ಮೂಲಕ ಮಕ್ಕಳು ಕನ್ನಡ ಕಲಿಯುವಂತಾಗಬೇಕು ಎಂಬ ದೃಷ್ಟಿಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಯೋಜನೆ ರೂಪಿಸಿದೆ. ಹಾಗೊಂದು ವೇಳೆ, ಪ್ರಾಧಿಕಾರವು ಆದೇಶ ಹೊರಡಿಸಿದರೆ, ಮುಸ್ಲಿಂ ಮಕ್ಕಳು ಮದರಸಾಗಳಲ್ಲಿ ಕನ್ನಡ ಕಲಿಯಲಿದ್ದಾರೆ.