ಪ್ರಮುಖ ಸುದ್ದಿ
ಅನ್ನಭಾಗ್ಯ ಅಕ್ಕಿಗೆ ಬ್ರೇಕ್ ಹಾಕ್ತಾರಂತೆ ಸಿಎಂ ಬಿ.ಎಸ್.ಯಡಿಯೂರಪ್ಪ?
ಬೆಂಗಳೂರು: ಅನ್ನಭಾಗ್ಯ ಯೋಜನೆ ಅಡಿ ಬಡ ಜನರಿಗೆ ಸರ್ಕಾರ ಪೂರೈಸುವ ಅಕ್ಕಿಗೆ ಕಡಿವಾಣ ಹಾಕಿ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ರೈತರಿಗೆ ಸಹಾಯ ಧನ ನೀಡುವ ಚಿಂತನೆ ಸರ್ಕಾರದ ಮುಂದಿದೆ ಎಂದು ತಿಳಿದು ಬಂದಿದೆ. ಕೇಂದ್ರ ಸರ್ಕಾರ ರೈತರಿಗೆ ವರ್ಷಕ್ಕೆ 6ಸಾವಿರ ರೂಪಾಯಿ ನೀಡುತ್ತಿದ್ದ ರಾಜ್ಯ ಸರ್ಕಾರದಿಂದ 4ಸಾವಿರ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಈಗಾಗಲೇ ಸಿಎಂ ಆದ ಮೊದಲ ದಿನವೇ ಯಡಿಯೂರಪ್ಪ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.
ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರದಿಂದ ರೈತರಿಗೆ ವರ್ಷಕ್ಕೆ 4ಸಾವಿರ ರೂಪಾಯಿ ಸಹಾಯ ಧನ ಒದಗಿಸುವ ಹಿನ್ನೆಲೆ ಹಳೇ ಬಜೆಟ್ ಗೆ ಬ್ರೇಕ್ ಹಾಕುವ ಚಿಂತನೆ ನಡೆದಿದೆ. ಅನ್ನಭಾಗ್ಯ ಯೋಜನೆಗೆ ಬ್ರೇಕ್ ಹಾಕಿ ಅಲ್ಲಿ ಉಳಿದ ಹಣವನ್ನು ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳುವ ನಿಟ್ಟಿನಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳು ಪ್ಲಾನ್ ಮಾಡಿದ್ದು ಸರ್ಕಾರಕ್ಕೆ ವರದಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.