ಪ್ರಮುಖ ಸುದ್ದಿ
ಕಾರಲ್ಲಿ ಅಕ್ರಮ ರಕ್ತ ಚಂದನ ಸಾಗಣೆ : ಆರೋಪಿ ಬಂಧನ
ಕೋಲಾರ : ಖಚಿತ ಮಾಹಿತಿ ಮೇರೆಗೆ ಮಾಲೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರಕ್ತಚಂದನ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಯಶವಂತಪುರ ಬಳಿ ಕಾರನ್ನು ತಡೆದು ಲಕ್ಷಾಂತರ ರೂಪಾಯಿ ಬೆಲೆ ಬಾಳುವ 250 ಕೆ.ಜಿ ರಕ್ತಚಂದನದ ತುಂಡುಗಳನ್ನು ಜಪ್ತಿಮಾಡಿದ್ದು ಕಾರನ್ನು ವಶಕ್ಕೆ ಪಡೆದಿದ್ದಾರೆ. ಆಂಧ್ರಪ್ರದೇಶ ಮೂಲದ ತಿರುಪತಿ ಎಂಬ ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.