ಪ್ರಮುಖ ಸುದ್ದಿ
ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಇನ್ನಿಲ್ಲ
ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ( 81) ಶನಿವಾರ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಶೀಲಾ ದೀಕ್ಷಿತ್ ನಿಧನಕ್ಕೆ ಪ್ರಧಾನಿ ಮೋದಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಶೀಲಾ ದೀಕ್ಷಿತ್ 1998 ರಿಂದ 2013 ರವರೆಗೆ ದೆಹಲಿ ಮುಖ್ಯಮಂತ್ರಿಯಾಗಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ನಂತರ 2014 ರಿಂದ ಕೇರಳದ ರಾಜ್ಯಪಾಲರಾಗಿ 6 ತಿಂಗಳ ಕಾಲ ಸೇವೆ ಸಲ್ಲಿಸಿದ್ದರು.