ಪ್ರಮುಖ ಸುದ್ದಿ
ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್!
ನವದೆಹಲಿ : ವಿದ್ವಾಂಸಕ ಕೃತ್ಯಕ್ಕೆ ಸ್ಕೆಚ್ ಹಾಕಿರುವ ಉಗ್ರಗಾಮಿಗಳು ದೇಶದ ವಿವಿಧ ನಗರಗಳಿಗೆ ನುಸುಳಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ವರದಿ ನೀಡಿದೆ ಎನ್ನಲಾಗಿದೆ. ಪರಿಣಾಮ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಪ್ರಮುಖ ನಗರಗಳೇ ಉಗ್ರರ ಟಾರ್ಗೆಟ್ ಆಗಿದ್ದು ಎಲ್ಲೆಡೆ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ದೇಶದ ಪ್ರಮುಖ ನಗರಗಳಲ್ಲಿ ಪೊಲೀಸ್ ಅಧಿಕಾರಿಗಳು ಹೈ ಅಲರ್ಟ್ ಘೋಷಿಸಿದ್ದು ಇಂದು ಸಂಜೆಯಿಂದಲೇ ಎಲ್ಲೆಡೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಪ್ರಮುಖ ಸ್ಮಾರಕಗಳು, ಜಲಾಶಯಗಳು ಸೇರಿದಂತೆ ಇತರೆ ಪ್ರಮುಖ ಸ್ಥಳಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ತಿಳಿದು ಬಂದಿದೆ.