Homeಜನಮನಪ್ರಮುಖ ಸುದ್ದಿ

ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಮೂವರು ಸಿಸಿಬಿ ಬಲೆಗೆ!

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೈಸರ್ ಪಾಷಾ, ರಬಿಲ್ ಷರೀಫ್, ಮಹಮ್ಮದ್ ಅದ್ನಾನ್ ಬಂಧಿತರಾಗಿದ್ದು. ಇ-ಸಿಗರೇಟ್ ಗಳನ್ನು ಶೇಖರಿಸಿಟ್ಟು ಆರೋಪಿಗಳು ಮಾರಾಟ ಮಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ನಿಷೇಧಿತ ಗಾಂಜಾ ಪತ್ತೆಯಾಗಿದೆ. ಬಂಧಿತರಿಂದ 30 ಲಕ್ಷ ಮೌಲ್ಯದ ಇ-ಸಿಗರೇಟ್‌ಗಳು ವಶಕ್ಕೆ ಪಡೆಯಲಾಗಿದ್ದು, ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button