ಶಹಾಪುರಃ ವಸತಿ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ 9 ನೇ ತರಗತಿ ವಿದ್ಯಾರ್ಥಿನಿ
ಶಹಾಪುರಃ ವಸತಿ ಶಾಲೆ ವಿದ್ಯಾರ್ಥಿನಿ ಮಗುವಿಗೆ ಜನನ

ಶಹಾಪುರಃ ವಸತಿ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ 9 ನೇ ತರಗತಿ ವಿದ್ಯಾರ್ಥಿನಿ
ಶಹಾಪುರಃ ವಸತಿ ಶಾಲೆ ವಿದ್ಯಾರ್ಥಿನಿ ಮಗುವಿಗೆ ಜನನ
ವಿನಯವಾಣಿ
ಶಹಾಪುರಃ ನಗರದ ಆಸರಮೊಹಲ್ಲಾ ಭಾಗದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಸತಿ ಶಾಲೆಯೊಂದರಲ್ಲಿ 9 ನೇ ತರಗತಿ ಅಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಬುಧವಾರ ಮದ್ಯಾಹ್ನ ವಸತಿ ಶಾಲೆಯ ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ.
ಶೌಚಾಲಯದಲ್ಲಿ ಈ ಕಿಶೋರಿ ಬಾಲೆ ಜನ್ಮ ನಿಡಿರುವದು ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ ವಿಷಯ ತಿಳಿದು ಶಾಲೆಗೆ ಭೇಟಿ ನೀಡಿ ಸಮರ್ಪಕ ಮಾಹಿತಿ ಪಡೆಯುತ್ತಿರುವೆ ಎಂದು ಜಿಲ್ಲಾ ಎಸ್ಸಿ ಎಸ್ಟಿ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯ ಮಲ್ಲಪ್ಪ ಉಳ್ಳಂಡಗೇರಿ ತಿಳಿಸಿದ್ದಾರೆ.
ಸದ್ಯ ಮಗು ಹಾಗೂ ತಾಯಿ ಇಬ್ಬರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೂಕ್ತ ಚಿಕಿತ್ಸೆ ವ್ಯವಸ್ಥೆ ಯಲ್ಲಿದ್ದು, ಆರಾಮವಾಗಿದ್ದಾರೆ ಎನ್ನಲಾಗಿದೆ. ಆದರೆ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ವಿಷಯ ತಿದಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕಾರ್ಯಪ್ರವತ್ತರಾಗಿದ್ದಾರೆ. ಈಗಾಗಲೇ ಸಮಾಜ ಕಲ್ಯಾಣ ಜಿಲ್ಲಾ ಅಧಿಕಾರಿಗಳು ವಸತಿ ಶಾಲೆಗೆ ಭೇಟಿ ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಜಿಲ್ಲಾ ಎಸ್ಸಿ, ಎಸ್ಟಿ ಜಾಗೃತ ಉಸ್ತುವಾರಿ ಸಮಿತಿ ಸದಸ್ಯರು ಹಾಜರಿದ್ದಾರೆ.