ಪ್ರಮುಖ ಸುದ್ದಿ

ಬೆಂಗಳೂರು ನಗರದಲ್ಲಿ ಎರಡು ದಿನಕಾಲ ನಿಷೇಧಾಜ್ಞೆ ಜಾರಿ!

ಬೆಂಗಳೂರು: ಜುಲೈ 29ರ ಸೋಮವಾರ ಅಧಿವೇಶನ ಆರಂಭವಾಗಲಿದ್ದು ಅದೇ ದಿನ ಮುಖ್ಯಮಂತ್ರಿ  ಬಿ.ಎಸ್.ಯಡಿಯೂರಪ್ಪ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಹೀಗಾಗಿ, ಮುಂಜಾಗೃತ ಕ್ರಮವಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜುಲೈ 29 ಹಾಗೂ 30ರಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಜುಲೈ 29ರ ಬೆಳಗ್ಗೆ 6 ಗಂಟೆಯಿಂದ ಜುಲೈ 30ರ ಮಧ್ಯರಾತ್ರಿ 12 ಗಂಟೆವರೆಗೆ ವಿಧಾನಸೌಧ ಸುತ್ತಮುತ್ತಲಿನ 2 ಕಿ.ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು ಜನ ಸಾಮಾನ್ಯರಿಗೆ ವಿಧಾನಸೌಧ ಪ್ರವೇಶ ನಿಷೇಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button