ಪ್ರಮುಖ ಸುದ್ದಿ
ಕೃರಿ ಅಮ್ಮ : ಬಳ್ಳಾರಿಯಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ
ಬಳ್ಳಾರಿ : ಇಬ್ಬರು ಮಕ್ಕಳನ್ನು ನೀರು ತುಂಬಿದ ಬ್ಯಾರಲ್ ನಲ್ಲಿ ಮುಳುಗಿಸಿ ತಾಯಿಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ನಗರದ ಎಂ.ಕೆ.ನಗರದಲ್ಲಿ ನಡೆದಿದೆ. ಮೂರು ವರ್ಷದ ಉದಯ್ , ಒಂದೂವರೆ ವರ್ಷದ ಭೂಮಿಕಾಳನ್ನು ನೀರಲ್ಲಿ ಮುಳುಗಿಸಿ ಹತ್ಯೆ ಮಾಡಿ ಲಕ್ಷ್ಮೀ(25) ನೇಣಿಗೆ ಶರಣಾಗಿದ್ದಾರೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕೌಲ್ ಬಜಾರ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಹಳೆ ನೆಲ್ಲೋಡಿ ಗ್ರಾಮದಲ್ಲಿ ಇಬ್ಬರು ಮಕ್ಕಳಿಗೆ ವಿಷವುಣ್ಣಿಸಿ ತಾಯಿಯೂ ವಿಷಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿತ್ತು. ಇದೀಗ ಜಿಲ್ಲೆಯಲ್ಲಿ ಎರಡನೇ ದುರಂತ ನಡೆದಿದ್ದು ಜನ ತಲ್ಲಣಗೊಂಡಿದ್ದಾರೆ.