ಪ್ರಮುಖ ಸುದ್ದಿ
ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ : ಐವರ ಬಂಧನ, ನಾಲ್ವರು ಮಹಿಳೆಯರ ರಕ್ಷಣೆ
ಯಾದಗಿರಿ : ಖಚಿತ ಮಾಹಿತಿ ಮೇರೆಗೆ ಡಿಸಿಬಿ ಪೊಲೀಸರು ದಾಳಿ ನಡೆಸಿದ್ದು ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಐವರು ಪುರುಷರನ್ನು ಬಂಧಿಸಿದ್ದು ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ. ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿರುವ ಬಗ್ಗೆ ದೂರುಗಳ ಹಿನ್ನೆಲೆಯಲ್ಲಿ ಸಿಪಿಐ ದೌಲತ್ ನೇತೃತ್ವದಲ್ಲಿ ಹೊಸಹಳ್ಳಿ ಬಳಿಯ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ನಗದು ಹಾಗೂ ಹತ್ತು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಾಲ್ವರು ಮಹಿಳೆಯರು ಗುಜರಾತ್ ಮೂಲದವರೆಂದು ತಿಳಿದು ಬಂದಿದೆ. ವೇಶ್ಯಾವಾಟಿಕೆ ದಂಧೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು ಗ್ರಾಮಾಂತರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.