ಪ್ರಮುಖ ಸುದ್ದಿ
ಮುಖ್ಯಮಂತ್ರಿ ಸ್ಥಾನಕ್ಕೆ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆ!
ಬೆಂಗಳೂರು : ವಿಶ್ವಾಸಮತ ನಿರ್ಣಯ ಸೋತ ಬಳಿಕ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇರವಾಗಿ ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಡಿಸಿಎಂ ಡಾ.ಜಿ.ಪರಮೇಶ್ವರ್, ಸಚಿವರಾದ ಡಿ.ಕೆ.ಶಿವಕುಮಾರ್, ಹೆಚ್.ಡಿ.ರೇವಣ್ಣ, ಬಂಡೆಪ್ಪ ಕಾಶೆಂಪುರ ಸೇರಿ ದೋಸ್ತಿ ನಾಯಕರು ಕುಮಾರಸ್ವಾಮಿ ಜತೆಗಿದ್ದರು. ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ 14ತಿಂಗಳ ದೋಸ್ತಿ ಸರ್ಕಾರದ ಆಡಳಿತ ಅಂತ್ಯವಾಗಿದ.