ಪ್ರಮುಖ ಸುದ್ದಿ
ಮೂವರು ಶಾಸಕರು ಅನರ್ಹ : ಸ್ಪೀಕರ್ ರಮೇಶ್ ಕುಮಾರ್ ಆದೇಶ
ಬೆಂಗಳೂರು : ರಾಣೇಬೆನ್ನೂರು ಕ್ಷೇತ್ರದ ಶಾಸಕ ಆರ್.ಅಶೋಕ, ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಅಥಣಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಮಹೇಶ್ ಕುಮಟಹಳ್ಳಿ ಅವರನ್ನು ಅನರ್ಹಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಆದೇಶಿಸಿದ್ದಾರೆ. 2023ರ ಮೇನಲ್ಲಿ ನಡೆಯುವ ವಿಧಾನಸಭೆ ಚುನವಣೆವರೆಗೆ ಅನರ್ಹಗೊಂಡಿರುವ ಮೂವರು ಶಾಸಕರು ಚುನಾವಣೆಗೆ ಸ್ಪರ್ದಿಸುವಂತಿಲ್ಲ ಎಂದು ಸಹ ಮಾದ್ಯಮಗಳಿಗೆ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ಅಂತೆಯೇ ಇನ್ನುಳಿದ ಶಾಸಕರ ರಾಜೀನಾಮೆ ಬಗ್ಗೆ ಕೆಲ ದಿನಗಳಲ್ಲೇ ತೀರ್ಪು ಪ್ರಕಟಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.