ಪ್ರಮುಖ ಸುದ್ದಿ
ಇಂದೇ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ!
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅದ್ಯಕ್ಷ ಅಮಿತ್ ಶಾ ಗ್ರೀನ್ ಸಿಗ್ನಲ್ ನೀಡಿದ್ದು ಬಿಜೆಪಿ ರಾಜ್ಯದ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದೇ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ. ಬೆಂಗಳೂರಿನ ದವಳಗಿರಿ ನಿವಾಸದಿಂದ ಬಿ.ಎಸ್.ಯಡಿಯೂರಪ್ಪ ರಾಜಭವನದತ್ತ ಹೊರಟಿದ್ದಾರೆ. ಅದಕ್ಕೂ ಮುನ್ನ ಆಂಜನೇಯ ದೇಗುಲಕ್ಕೆ ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ.
ವಿಶೇಷ ಪೂಜೆ ಬಳಿಕ 10 ಗಂಟೆಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಭೇಟಿ ಮಾಡಿ ಸರ್ಕಾರ ರಚನೆಗೆ ಅವಕಾಶ ಕೇಳಿ ಮನವಿ ಮಾಡಲಿದ್ದಾರೆ. ಬಳಿಕ ಮದ್ಯಾನ 12: 30 ಕ್ಕೆ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಖುದ್ದು ಯಡಿಯೂರಪ್ಪ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.