ಪ್ರಮುಖ ಸುದ್ದಿ
ಸಿಎಂ ಯಡಿಯೂರಪ್ಪ ಮನೆಗೆ ಆ ಮಠಾಧೀಶರು ಬಂದಿದ್ದೇಕೆ?
ಬೆಂಗಳೂರು : ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಅವರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಯಾದವಶ್ರೀಗಳು ಯಡಿಯೂರಪ್ಪ ಅವರ ದವಳಗಿರಿ ನಿವಾಸಕ್ಕೆ ತೆರಳಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಯಾದವ ಸಮುದಾಯದ ಪರವಾಗಿ ಮನವಿ ಸಲ್ಲಿಸಿದರು.
ಸಿಎಂ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು ಕಳೆದ ಹದಿನೈದು ವರ್ಷಗಳಿಂದ ಯಾದವ ಸಮುದಾಯದ ಯಾರೊಬ್ಬರೂ ಶಾಸಕರಾಗಿ ವಿಧಾನಸೌಧ ಪ್ರವೇಶಿಸಿರಲಿಲ್ಲ. ಈಗ ಪೂರ್ಣಿಮಾ ಶ್ರೀನಿವಾಸ್ ಅವರು ಹಿಂದುಳಿದ ಯಾದವ ಸಮುದಾಯದ ಏಕೈಕ ಶಾಸಕಿ ಆಗಿದ್ದು ಅವರಿಗೆ ಮಂತ್ರಿಗಿರಿ ನೀಡುವ ಮೂಲಕ ಹಿಂದುಳಿದ ಯಾದವ ಸಮುದಾಯಕ್ಕೆ ನ್ಯಾಯ ಒದಗಿಸಬೇಕೆಂದು ಮುಖ್ಯಮಂತ್ರಿ ಯಡಿಯಡಿಯೂಪ್ಪ ಅವರಿಗೆ ಮನವಿ ಮಾಡಿದ್ದೇನೆ ಮುಖ್ಯಮಂತ್ರಿಗಳ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ ಎಂದರು.




