ಪ್ರಮುಖ ಸುದ್ದಿ
ಉತ್ತರ ಕರ್ನಾಟಕ ಪ್ರದೇಶದಲ್ಲಿ ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ
ಬೆಂಗಳೂರು : ಕೃಷ್ಣಾ ನದಿ ಪ್ರವಾಹದಿಂದಾಗಿ ಉತ್ತರ ಕರ್ನಾಟಕದ ರಾಯಚೂರು, ಯಾದಗಿರಿ ಸೇರಿದಂತೆ ಇತರೆ ಜಿಲ್ಲೆಗಳ ಜನ ತತ್ತರಿಸಿದ್ದಾರೆ. ಕೃಷ್ಣನದಿ ಪಾತ್ರದ ಗ್ರಾಮಗಳ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಣಾಮ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಬೆಂಗಳೂರಿನ ಹೆಚ್.ಎ.ಎಲ್ ನಿಂದ ವಿಮಾನದ ಮೂಲಕ ಬಳ್ಳಾರಿಗೆ ತೆರಳಿದರು. ಬಳಿಕ ಬಳ್ಳಾರಿಯಿಂದ ಹೆಲಿಕಾಪ್ಟರ್ ಮೂಲಕ ತೆರಳಿ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ಕೈಯಲಿ ನಕ್ಷೆ ಹಿಡಿದು ಕುಳಿತ ಸಿಎಂ ಹೆಲಿಕಾಪ್ಟರ್ ಮೂಲಕವೇ ಆಯಾ ಭಾಗದ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.