ಪ್ರಮುಖ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಭೇಟಿ ಬಳಿಕ ಸಿಎಂ ಬಿಎಸ್ ವೈ ಟ್ವೀಟ್!

ನವದೆಹಲಿ : ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ನೂತನ ಸಂಪುಟ ರಚನೆ ಬಗ್ಗೆ ಚರ್ಚಿಸಿದ್ದಾರೆ. ಅಂತೆಯೇ ರಾಜ್ಯದಲ್ಲಿ ಉಂಟಾಗಿರುವ ನೆರೆಪ್ರವಾಹದ ಪರಿಹಾರಕ್ಕೆ ಕೇಂದ್ರದ ನೆರವು ಕೋರಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಯಡಿಯೂರಪ್ಪ ಅವರಿಗೆ ಕೇಂದ್ರ ಸಚಿವರಾದ ಸದಾನಂದಗೌಡ, ಪ್ರಹ್ಲಾದ್ ಜೋಶಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಶಾಸಕರಾದ ಗೋವಿಂದ ಕಾರಜೋಳ, ಬಸವರಾಜ್ ಬೊಮ್ಮಾಯಿ ಸಾಥ್ ನೀಡಿದ್ದಾರೆ.

ಪ್ರಧಾನಿ ಮೋದಿ ಭೇಟಿ ಬಳಿಕ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ ಅವರು ಶುಭಾಶಯ ಕೋರಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಥನ್ಯವಾದಗಳನ್ನು ತಿಳಿಸಿದ್ದು ನಿಮ್ಮ ಸಮರ್ಥ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯವನ್ನು ಅಭಿವೃದ್ಧಿಯ ಹೊಸ ಯುಗಕ್ಕೆ ಕೊಂಡೊಯ್ಯಲು ಬಯಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

 

 

Related Articles

Leave a Reply

Your email address will not be published. Required fields are marked *

Back to top button