ಬಸವಭಕ್ತಿ
ವಿನಯವಾಣಿ ‘ವಚನ ಸಿಂಚನ’ : ಭಕ್ತಿಯೆಂಬುದು ಬೇರು…
ಭಕ್ತಿಯೆಂಬುದು ಬೇರು, ವಿರಕ್ತಿಯೆಂಬುದೆ ಮರ, ಫಲವೆಂಬುದೆ ಜ್ಞಾನ.
ಪಕ್ವಕ್ಕೆ ಬಂದಿತ್ತೆಂಬಾಗಲೆ ಅವಧಿಜ್ಞಾನ.
ತೊಟ್ಟು ಬಿಟ್ಟಲ್ಲಿಯೆ ಪರಮಜ್ಞಾನ.
ಸವಿದಲ್ಲಿಯೆ ಅಂತರೀಯಜ್ಞಾನ.
ಸುಖ ತನ್ಮಯವಾದಲ್ಲಿಯೆ ದಿವ್ಯಜ್ಞಾನ.
ದಿವ್ಯ ತೇಜಸ್ಸು ಹಿಂಗದಲ್ಲಿಯೆ ಪರಿಪೂರ್ಣಜ್ಞಾನ.
ಅದು ಮಹದೊಡಲೆಂಬುದಕ್ಕೆ ಎಡೆಯಿಲ್ಲ.
ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗವು ಅಪ್ರಮಾಣಾದ ಕಾರಣ.
-ಪ್ರಸಾದಿ ಭೋಗಣ್ಣ