ಪ್ರಮುಖ ಸುದ್ದಿ
ಶಹಾಪುರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಆ.10 ರಂದು ಉಚಿತ ತಪಾಸಣೆ ಶಿಬಿರ
ಯಾದಗಿರಿ, ಶಹಾಪುರಃ ಭಗವಾನ್ ಜೀವೇಶ್ವರ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ನಗರದ ಸ್ವಕುಳ ಸಾಳಿ ಸಮಾಜ ಹಾಗೂ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಶ್ರೀ ಜೀವೇಶ್ವರ ಕಲ್ಯಾಣ ಮಂಟಪದಲ್ಲಿ ವಿವಿಧ ಪ್ರಮುಖ ರೋಗಗಳ ಕುರಿತು ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದ್ದು, ಸರ್ವರೂ ಶಿಬಿರದ ಸದುಪಯೋಗ ಪಡೆಯಬೇಕೆಂದು ಸ್ವಕುಳ ಸಾಳಿ ಸಮಾಜದ ಅಧ್ಯಕ್ಷ ರಾಜು ಚಿಲ್ಲಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಲದೆ ಶಿಬಿರದಲ್ಲಿ ವಿವಿಧ ರೋಗಗಳ ನುರಿತ ತಜ್ಞರು ಹಲವು ಸೌಲಭ್ಯ ಉಪಕರಣಗಳೊಂದಿಗೆ ಭಾಗವಹಿಸಲಿದ್ದು, ಸರ್ವರೂ ಶಿಬಿರದ ಸದುಪಯೋಗ ಪಡೆಯಬೇಕು. ಹೃದಯ ರೋಗ, ನರರೋಗ, ಮೂತ್ರಪಿಂಡದಲ್ಲಿ ಕಲ್ಲು ಸೇರಿದಂತೆ ಸಾಮಾನ್ಯ ರೋಗಗಳ ತಪಾಸಣೆ ನಡೆಸಲಿದ್ದು, ಗ್ರಾಮೀಣ ಭಾಗದ ಜನರಿಗೆ ಈ ಶಿಬಿರದ ಕುರಿತು ತಿಳಿಸುವ ಮೂಲಕ ಶಿಬಿರದಲ್ಲಿ ಭಾಗವಹಿಸುವಂತೆ ಎಲ್ಲರೂ ಸಹಕಾರ ನೀಡಬೇಕೆಂದು ಅವರು ಕೋರಿದ್ದಾರೆ.