ಪ್ರಮುಖ ಸುದ್ದಿ
ಅಗತ್ಯ ನೆರವು ನೀಡಲಾಗುವುದು ಆತಂಕ ಬೇಡ – ಸಿಎಂ
ಬೆಳಗಾವಿ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ನಗರದ ಪರಿಹಾರ ಕೇಂದ್ರ ಹಾಗೂ ಜಿಲ್ಲೆಯ ವಿವಿದೆಡೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ವೀಕ್ಷಣೆ ನಡೆಸಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಜನರಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿ ಆತಂಕ ಬೇಡ ಎಂದು ಹೇಳಿದ್ದಾರೆ. ಮನೆ ಕಳೆದುಕೊಂಡವರಿಗೆ ಶೀಘ್ರ ಸೂರು ಕಲ್ಪಿಸುವುದು ಹಾಗೂ ಆಸ್ತಿಪಾಸ್ತಿ ನಷ್ಟದ ಬಗ್ಗೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆಂದು ಸಿಎಂ ತಿಳಿಸಿದ್ದಾರೆ.
ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಶೋಭಾ ಕರಂದ್ಲಾಜೆ, ಕೋಟ ಶ್ರೀನಿವಾಸ ಪೂಜಾರಿ, ಪ್ರತಾಪ್ ಸಿಂಹ, ಬಿ.ವೈ.ರಾಘವೇಂದ್ರ, ಸಿ.ಎಂ.ಉದಾಸಿ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಅವರೆಲ್ಲಾ ರಾಜ್ಯದ ವಿವಿದೆಡೆ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಅಗತ್ಯ ನೆರವು ನೀಡಲಿದ್ದಾರೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.