ಪ್ರಮುಖ ಸುದ್ದಿ
ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ಆಸ್ಪತ್ರೆಗೆ ದಾಖಲು
ದೆಹಲಿ: ಅನಾರೋಗ್ಯದಿಂದಾಗಿ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿಯವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಅನಾರೋಗ್ಯದ ಕಾರಣಗಳಿಂದ ಅರುಣ್ ಜೇಟ್ಲಿಯವರು ಕಳೆದ ವರ್ಷ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಜೇಟ್ಲಿ ಅವರು ನಿಶ್ಯಕ್ತಿ ಮತ್ತು ನರರೋಗ ಸಮಸ್ಯೆಯಿಂದಾಗಿ ಬಳಲುತ್ತಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ಮೂಲಗಳಿಂದ ತಿಳಿದು ಬಂದಿದೆ.