ಪ್ರಮುಖ ಸುದ್ದಿ
ಪ್ರವಾಹ : ಕೇಂದ್ರ ಹಣಕಾಸು ಸಚಿವರ ಭೇಟಿ
ಬೆಳಗಾವಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಜಿಲ್ಲೆಯ ವಿವಿದೆಡೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿದರು. ಪ್ರವಾಹಕ್ಕೆ ಸಿಲುಕಿರುವ ಸಂತ್ರಸ್ಥರಿಗೆ ಸಾಂತ್ವನ ಹೇಳಿ ಪರಿಹಾರದ ಭರವಸೆ ನೀಡಿದರು. ಬಳಿಕ ಅಧಿಕಾರಿಗಳ ಸಭೆ ನಡೆಸಿ ಶೀಘ್ರಗತಿಯಲ್ಲಿ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕೇಂದ್ರ ಸಚಿವ ಸುರೇಶ್ ಅಂಗಡಿ ಸಾಥ್ ನೀಡಿದ್ದರು. ಆದರೆ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ತರಾತುರಿಯಲ್ಲಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿ ಹೀಗೆ ಬಂದು ಹಾಗೇ ಹೋಗಿದ್ದಾರೆ. ಸಚಿವರ ಭೇಟಿ ಅಧಿಕಾರಿಗಳ ಮೀಟಿಂಗ್ ಗೆ ಸೀಮಿತವಾಗಿತ್ತು ಎಂಬ ಆರೋಪ ಕೇಳಿ ಬಂದಿದೆ.