ಪ್ರಮುಖ ಸುದ್ದಿ
ಭೀಕರ ಅಪಘಾತ : ಮೂವರ ಸಾವು, ಮತ್ತೋರ್ವನಿಗೆ ಗಂಭೀರ ಗಾಯ
ಹಾವೇರಿ: ಮೋಟೆಬೆನ್ನೂರು ಗ್ರಾಮದ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಕೊಟ್ರೇಶ್(45), ಆನಂದಕುಮಾರ್ (38) ಹಾಗೂ ಸತೀಶಕುಮಾರ್ (28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರದೀಪ್ ಎಂಬ ಮತ್ತೋರ್ವ ವ್ಯಕ್ತಿ ಗಂಬೀರವಾಗಿ ಗಾಯಗೊಂಡಿದ್ದು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.