ಪ್ರಮುಖ ಸುದ್ದಿ
ಸಾಮಾನ್ಯ ಕಾರ್ಯಕರ್ತನಿಗೂ ಸ್ಥಾನಮಾನ – ನಳಿನ್ ಕುಮಾರ್ ಕಟೀಲು
ಮಂಗಳೂರು : ಭಾರತೀಯ ಜನತಾ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಸೂಕ್ತ ಸ್ಥಾನಮಾನ ನೀಡಲಾಗುತ್ತದೆ ಎಂಬುದಕ್ಕೆ ನಾನೇ ಸಾಕ್ಷಿ ಎಂದು ಬಿಜೆಪಿ ರಾಜ್ಯ ಘಟಕದ ನೂತನ ಅದ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ. ಕೇರಳದಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿಯಲ್ಲಿ ಭಾಗವಹಿಸಿದ್ದ ಕಟೀಲು ಇಂದು ಬೆಳಗಿನ ಜಾವ ನೇರವಾಗಿ ಮಂಗಳೂರಿಗೆ ಆಗಮಿಸಿದರು. ಈ ಸಂದರ್ಭದಲ್ಲಿ ರೈಲ್ವೆ ಜಂಕ್ಷನ್ ಗೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ನಳೀಕ್ ಕುಮಾರ್ ಗೆ ಅದ್ಧೂರಿಯಾಗಿ ಸ್ವಾಗತಿಸುವ ಮೂಲಕ ಅಭಿನಂದಿಸಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಳೀನ್ ಕುಮಾರ್ ಕಟೀಲು ಬಿಜೆಪಿಯಲ್ಲಿ ಸಾಮಾನ್ಯ ಕಾರ್ಯಕರ್ತರನ್ನೂ ಗುರುತಿಸಲಾಗುತ್ತದೆ. ರಾಜ್ಯದಲ್ಲಿ ಬಿಜೆಪಿ ಸಂಘಟನೆ ಮತ್ತಷ್ಟು ಬಲ ಪಡಿಸುವ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.