ಪ್ರಮುಖ ಸುದ್ದಿ
ಬಿಜೆಪಿಯಲ್ಲಿ ಹೈಕಮಾಂಡ್ ಸಂಸ್ಕೃತಿ ಇಲ್ಲ – ಸಚಿವ ಅಶ್ವಥ್ ನಾರಾಯಣ
ಬೆಂಗಳೂರು: ಬಿಜೆಪಿಯಲ್ಲಿ ಹೈಕಮಾಂಡ್ ಸಂಸ್ಕೃತಿ ಇಲ್ಲ, ಬದಲಾಗಿ ಮುಖ್ಯಮಂತ್ರಿಗಳು ಕೇಂದ್ರ ನಾಯಕರ ಸಲಹೆ ಪಡೆದಿದ್ದು ರಾಜ್ಯಮಟ್ಟದಲ್ಲೇ ಸಿಎಂ ಯಡಿಯೂರಪ್ಪ ಎಲ್ಲವನ್ನೂ ನಿರ್ಧರಿಸಿದ್ದಾರೆ ಎಂದು ಸಚಿವ ಅಶ್ವಥ್ ನಾರಾಯಣ ಹೇಳಿದ್ದಾರೆ. ನಗರಾಭಿವೃದ್ಧಿ ಸೇರಿದಂತೆ ಯಾವುದೇ ಖಾತೆಗೆ ನಾನು ಬೇಡಿಕೆ ಇಟ್ಟಿಲ್ಲ. ನನ್ನ ಮತ್ತು ಆರ್.ಅಶೋಕ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಇನ್ನು ಖಾತೆ ಹಂಚಿಕೆ ಸೇರಿದಂತೆ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಗುಂಪುಗಾರಿಕೆಯೂ ಇಲ್ಲ, ನಾವೆಲ್ಲ ಒಗ್ಗಟ್ಟಾಗಿ ಇದ್ದೇವೆ. ಅಭಿವೃದ್ಧಿ ಪರ್ವ ಆರಂಭ ಆಗಿದೆ ಎಂದು ಸಚಿವ ಅಶ್ವಥ್ ನಾರಾಯಣ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.