ಪ್ರಮುಖ ಸುದ್ದಿ
ಡಿಕೆಶಿಗೆ ಜಾಮೀನು ಮಂಜೂರಿಗೆ ಸಂತಸ ಪಟ್ಟ ಸಿದ್ರಾಮಯ್ಯ
ವಿವಿ ಡೆಸ್ಕ್ಃ ಡಿ.ಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದು ನನಗೆ ಸಂತೋಷ ಉಂಟು ಮಾಡಿದೆ. ದ್ವೇಷ ರಾಜಕಾರಣದ ಉದ್ದೇಶದಿಂದ ಪ್ರಕರಣವು ತನಿಖಾ ಹಂತದಲ್ಲಿರುವಾಗಲೇ ಅವರನ್ನು ಬಂಧಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡಲಾಗಿತ್ತು. ಅವರಿಗೆ ಜಾಮೀನು ದೊರೆತಿರುವುದು ನ್ಯಾಯಕ್ಕೆ ದೊರೆತ ಜಯವೆಂದು ವಿಪಕ್ಷ ನಾಯಕ ಸಿದ್ರಾಮಯ್ಯ ಟ್ವಿಟ್ ಮಾಡಿದ್ದಾರೆ.
ಟ್ವಿಟ್ ಮೂಲಕ ತಮ್ಮ ಸಂತಸವನ್ನು ಹೊರಹಾಕಿದ ಅವರು, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂಬ ಆರೋಪವನ್ನು ಪರೋಕ್ಷವಾಗಿ ಹೊರ ಹಾಕಿದ್ದಾರೆ.