ಪ್ರಮುಖ ಸುದ್ದಿ
ರಮೇಶ ನಾಲಿಗೆ ಉದ್ದವಿದೆ-ಸತೀಶ ಜಾರಕಿಹೊಳಿ
ಬೆಳಗಾವಿಃ ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರವಸೆ ಕಳೆದುಕೊಂಡಿತ್ತು. ಇದೀಗ ಕಾಂಗ್ರೆಸ್ ಜಿಲ್ಲೆಯಲ್ಲಿ ಉತ್ತಮ ಸಂಘಟನೆ ಮೂಲಕ ಜನರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಈ ಬಾರಿ ನಡೆಯುವ ಉಪಚುನಾವಣೆಯಲ್ಲಿ ನಾವು ಜಯ ಸಾಧಿಸಲಿದ್ದೇವೆ ಎಂದು ಕಾಂಗ್ರೆಸ್ ಮುಖಂಡ ಸತೀಶ ಜಾರಕಿಹೊಳಿ ಮಾಧ್ಯಮಕ್ಕೆ ಹೇಳಿಕೆ ನೀಡಿದರು.
ಅಲ್ಲದೆ ರಮೇಶ ಜಾರಕಿಹೊಳಿ ನಾಲಿಗೆ ಉದ್ದವಿದೆ. ಬಾಯಿಗೆ ಬಂದಂತೆ ಮಾತನಾಡುವ ಆತನ ನಂಬಿದ್ದವರೇ ಆತನಿಗೆ ಮಗ್ಗಲು ಮುಳುವಾಗಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಜಿಲ್ಲೆಯಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಿದ್ದೇವೆ ಎಂದರು.