ಪ್ರಮುಖ ಸುದ್ದಿ
ರಾಜ್ಯದಲ್ಲಿ ಉಪಚುನಾವಣೆ ಃ 10 ಕ್ಷೇತ್ರಗಳಲ್ಲಿ ಶಿವಸೇನೆ ಸ್ಪರ್ಧೆ
ಹುಬ್ಬಳ್ಳಿಃ ಕರ್ನಾಟಕದಲ್ಲಿ ನಡೆಯುತ್ತಿರುವ 15 ಕ್ಷೇತ್ರಗಳ ವಿಧಾನಸಭೆ ಉಪ ಚುನಾವಣೆಯಲ್ಲಿ ಶಿವಸೇನೆಯ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಕರ್ನಾಟಕ ರಾಜ್ಯ ಶಿವಸೇನಾ ಅಧ್ಯಕ್ಷ ಕುಮಾರ್ ಹಕಾರಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯಲಿರುವ ಉಪಚುನಾವನೆಯಲ್ಲಿ ಶಿವಸೇನೆಯಿಂದ ಕನಿಷ್ಟ 10 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಸ್ಪರ್ಧೆಗಿಳಿಯಲಿದ್ದು, ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಸಿದ್ಧವಿದ್ದು, ಉತ್ತರ ಕರ್ನಾಟಕದ 6 ಕ್ಷೇತ್ರ ಮತ್ತು ದಕ್ಷಿಣ ಕರ್ನಾಟಕದ 4 ಕ್ಷೇತ್ರಗಳಲ್ಲಿ ಶಿವಸೇನೆಯ ಅಭ್ಯರ್ಥಿಗಳು ಸ್ಪರ್ಧೆಗೆ ಇಳಿಯಲಿದ್ದಾರೆ. ಅಭ್ಯರ್ಥಿಗಳ ಗೆಲುವಿಗೆ ಶ್ರಮವಹಿಸಲಾಗುವದು ಎಂದು ತಿಳಿಸಿದರು.