ಪ್ರಮುಖ ಸುದ್ದಿ
ಯಾದಗಿರಿಃ ಪ್ರತ್ಯೇಕ ಪ್ರಕರಣ – ಶಿಕ್ಷಕರಿಬ್ಬರ ಅಮಾನತು
ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರೂ ಶಿಕ್ಷಕರು ಅಮಾನತು.!
ಯಾದಗಿರಿಃ ಇತ್ತಿಚೆಗೆ ಸಹ ಶಿಕ್ಷಕಿ ಮೇಲೆ ಹಲ್ಲೆ ಮಾಡಿ ಶಿಕ್ಷಕನೋರ್ವ ದರ್ಪ ತೋರಿರುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಅವರಿಗೆ ದೂರು ಸಲ್ಲಿಸಲಾಗಿತ್ತು. ದೂರಿನನ್ವಯ ತನಿಖೆ ನಡೆಸಿದ ಬಿಇಓ ಡಿಡಿಪಿಐ ಅವರಿಗೆ ಮುಂದಿನ ಕ್ರಮಕ್ಕೆ ವರದಿ ಸಲ್ಲಿಸಿದ್ದರು.
ತರುವಾಯ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾರ್ಥಮಿಕ ಶಾಲೆಯ ಶಿಕ್ಷಕ ಆರೋಪಿ ಸೋಮಶೇಖರ ರಾಠೋಡ್ ಎಂಬಾತನ ವಿರುದ್ಧ ಶಿಸ್ತು ಕ್ರಮಕೈಗೊಂಡ ಯಾದಗಿರಿ ಡಿಡಿಪಿಐ ಶ್ರೀನಿವಾಸ ರೆಡ್ಡಿ ಅಮಾನತು ಆದೇಶ ಹೊರಡಿಸಿದ್ದಾರೆ.
ಇನ್ನೊಂದು ಪ್ರಕರಣದಡಿ ಶಿಕ್ಷಕನೋರ್ವ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಅಮಾನತು ಆಗಿದ್ದಾನೆ.
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕದರಾಪುರ ಶಾಲೆ ಶಿಕ್ಷಕ ಬಾಲರಾಜ್ ಎಂಬಾತನೇ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಅಮಾನತು ಹೊಂದಿದ್ದಾನೆ. ಈ ಕುರಿತು ಶಹಾಪುರ ಬಿಇಓ ರುದ್ರಗೌಡ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.