ಪ್ರಮುಖ ಸುದ್ದಿ
ಮಾಜಿ ಸಚಿವ ಸಿ.ಚನ್ನಿಗಪ್ಪ ವಿಧಿವಶ
ಮಾಜಿ ಸಚಿವ ಸಿ.ಚನ್ನಿಗಪ್ಪ ಇನ್ನಿಲ್ಲ
ತುಮಕೂರಃ ಮಾಜಿ ಸಚಿವ ಸಿ.ಚನ್ನಿಗಪ್ಪ ಅವರು ಇಂದು ವಿಧಿವಶರಾಗಿದ್ದಾರೆ. ಅವರು ಕಳೆದ ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯಿತ್ತಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗಿದೆ.
ಚನ್ನಿಗಪ್ಪ ನಿಧನಕ್ಕೆ ಎಚ್ಡಿಕೆ ಕಂಬನಿ
ಮಾಜಿ ಸಚಿವ ಚನ್ನಿಗಪ್ಪ ಜೆಡಿಎಸ್ ಪಕ್ಷದ ಹಿರಿಯು ಧುರೀಣರಾಗಿದ್ದರು, ಪಕ್ಷದ ಬೆಳವಣಿಗೆಗೆ ಸಾಕಷ್ಟು ಶ್ರಮಿಸಿದ್ದರು, ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶ ದಲ್ಲಿ ತಿಳಿಸಿದ್ದಾರೆ.