ಪ್ರಮುಖ ಸುದ್ದಿ
ಕರಾವಳಿಯಲ್ಲಿ ಭಾರಿ ಮಳೆಃ ಇನ್ನೂ 3 ದಿನ ಮಳೆ ಸಾಧ್ಯತೆ
ಕರಾವಳಿಯಲ್ಲಿ 3 ದಿನ ಮಳೆ ಸಾಧ್ಯತೆ- ಹವಾಮಾನ ಇಲಾಖೆ
ವಿವಿಡೆಸ್ಕ್ಃ ಕರಾವಳಿ ಭಾಗದಲ್ಲಿ ಗುಡುಗು ಸಮೇತ ಭಾರಿ ಮಳೆಯಾಗಿದ್ದು, ಮುಂದಿನ ಮೂರು ದಿನಗಳವರೆಗೂ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರ, ಶಿವಮೊಗ್ಗ, ಪುತ್ತೂರು, ಹೊಸನಗರದಲ್ಲಿ ವರ್ಷದ ಮೊದಲ ಮಳೆ ಇದಾಗಿದ್ದು, ಗುಡುಗು ಮಿಂಚು ಸಹಿತ ಭಾರಿ ಮಳೆ ಸುರಿದಿದೆ. ಇದು ಮುಂದಿನ ಮೂರು ದಿನಗಳ ಕಾಲ ಮುಂದುವರೆಯಲಿದೆ.
ಅಕಾಲಿಕ ಮಳೆಯಾದ ಪರಿಣಾಮ ಸಾರ್ವಜನಿಕ ಜೀವನ ಅಡಚಣೆ ಉಂಟಾಗಿದೆ ಎನ್ನಲಾಗಿದೆ. ಕೊಡಗು, ಚಿಕ್ಕಮಂಗಳೂರ, ಶಿವಮೊಗ್ಗ, ಕರಾವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ.