ರಾಜ್ಯಕ್ಕೆ ಕಾಲಿಟ್ಟ ಕೊರೊನಾಃ ಪ್ರಾಥಮಿಕ ಶಾಲೆಗೆ ರಜೆ ಘೋಷಣೆ
ರಾಜ್ಯಕ್ಕೆ ಕಾಲಿಟ್ಟ ಕೊರೊನಾಃ ಪ್ರಾಥಮಿಕ ಶಾಲೆಗೆ ರಜೆ ಘೋಷಣೆ
ಬೆಂಗಳೂರಃ ರಾಜ್ಯದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಜ್ಯ ಸರ್ಕಾರ ಮುಂಜಾಗೃತ ಕ್ರಮವಾಗಿ 1 ನೇ ತರಗತಿಯಿಂದ 5 ನೇ ತರಗತಿವರೆಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಶಾಲೆಗಳಿಗೆ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶಿದೆ.
ರಾಜ್ಯದಲ್ಲಿ ಮೊದಲ ಕೊರೋನಾ ಸೋಂಕು ಪತ್ತೆ ಹಿನ್ನೆಲೆ ಯಲ್ಲಿ ಸರ್ಕಾರ ಹೈ ಅಲರ್ಟ್ ಆಗಿದೆ ಎಂದು ವೈದ್ಯಕೀಯ ಸಚಿವ ಡಾ.ಸುಧಾಕರ ತಿಳಿಸಿದ್ದಾರೆ. ಈಗಾಗಲೇ ನರ್ಸರಿ, LKG, UKG ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ರಜೆ ಘೋಷಣೆಯಿಂದ ಯಾರೊಬ್ಬರು ಆತಂಕ ಪಡುವ ಅಗತ್ಯ ವಿಲ್ಲ, ಮುನ್ನೆಚ್ಚರಿಕೆ ಕ್ರಮವಾಗಿ ಕ್ರಮಕೈಗೊಳ್ಳಲಾಗಿದೆ.
ಅಲ್ಲದೆ ಪ್ರಾಥಮಿಕ ಶಾಲಾ ಪರೀಕ್ಷೆಗಳನ್ನು ಆದಷ್ಟು ಮಾ.17 ರೊಳಗೆ ಮುಗಿಸಿ ರಜೆ ನೀಡಬೇಕೆಂದು ಶಿಕ್ಷಣ ಇಲಾಖೆ ತಿಳಿಸಿದೆ.
ಉಳಿದಂತೆ ಪ್ರೌಢ ಶಾಲಾ ವಿದ್ಯಾರ್ಥಿಗಳ ಪರೀಕ್ಷೆತನ್ನ ಮಾ,23 ರೊಳಗೆ ಮುಗಿಸಬೇಕು. ಇನ್ನು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳು ನಿಗದಿ ಪಡಿಸಿದ ದಿನಾಂಕದಂತೆ ಜರುಗಲಿವೆ ಎಂದು ಸ್ಪಷ್ಟ ಪಡಿಸಲಾಗಿದೆ.