ಪ್ರಮುಖ ಸುದ್ದಿ
ಮೆ.3 ರವರೆಗೂ ಸಂಪೂರ್ಣ ಲಾಕ್ ಡೌನ್ ಮುಂದುವರಿಕೆ- ಮಾಧುಸ್ವಾಮಿ
ಮೆ.3 ರವರೆಗೂ ಸಂಪೂರ್ಣ ಲಾಕ್ ಡೌನ್ ಮುಂದುವರಿಕೆ- ಮಾಧುಸ್ವಾಮಿ
ಬೆಂಗಳೂರಃ ಲಾಕ್ ಡೌನ್ ಸಡಿಲಿಕೆ ಮಾಡಲು ಹೋಗಿ ರಿಸ್ಕ್ ತೆಗೆದುಕೊಳ್ಳುವದು ಬೇಡವೆಂಬ ಹಲವು ಸಚಿವರ ಅಭಿಪ್ರಾಯ ವ್ಯಕ್ತವಾಗದ ಹಿನ್ನೆಲೆ ಮೇ. 3 ರವರೆಗೂ ಸಂಪೂರ್ಣ ಲಾಕ್ ಡೌನ್ ಮುಂದುವರೆಯಲಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.
ನಗರದಲ್ಲಿ ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಟಿಪ್ಪು ಜಯಂತಿ ಸೇರಿ ಹಲವು ಗಲಾಟೆಗಳಲ್ಲಿ ದಾಖಲಾದ ಸುಮಾರು 152 ಪ್ರಕರಣಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ.
ಅಲ್ಲದೆ ಉತ್ತರ ಪ್ರದೇಶ, ಕೇರಳ ಮಾದರಿಯಲ್ಲಿ ಕೊರೊನಾ ತಡೆಗೆ ಕ್ರಮಕ್ಕೆ ಚಿಂತನೆ ನಡೆಸಲಾಗುತ್ತಿದೆ. ಕರ್ನಾಟಕ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆಯಡಿ ಸುಗ್ರಿವಾಜ್ಞೆ ಜಾರಿಗೆ ತರಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.