ರಾಯಚೂರ ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರಿಡಲು ಮನವಿ
ರಾಯಚೂರ ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರಿಡಲು ಮನವಿ
ಶಹಾಪುರ: ನೂತನವಾಗಿ ಅಸ್ತಿತ್ವಕ್ಕೆ ಬರಲಿರುವ ರಾಯಚೂರು ವಿಶ್ವ ವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ವಿಶ್ವ ವಿದ್ಯಾಲಯ ಎಂದು ನಾಮಕರಣ ಮಾಡಬೇಕೆಂದು ಒತ್ತಾಯಿಸಿ ಶುಕ್ರವಾರ ತಾಲ್ಲೂಕು ವಾಲ್ಮೀಕಿ ನಾಯಕ ಸಂಘದ ಮುಖಂಡರು ತಹಶೀಲ್ದಾರ ಜಗನಾಥರಡ್ಡಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
ಯಾದಗಿರಿ ಮತ್ತು ರಾಯಚೂರು ಜಿಲ್ಲೆಯಲ್ಲಿ ಹೆಚ್ಚಾಗಿ ವಾಲ್ಮೀಕಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಅಲ್ಲದೆ ರಾಯಚೂರು ಲೋಕಸಭಾ ಕ್ಷೇತ್ರವು ಸಹ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ. ವಾಲ್ಮೀಕಿ ರಾಮಾಯಣವು ಮನುಕುಲಕ್ಕೆ ಮಾದರಿಯಾಗಿದೆ.
ಅಲ್ಲದೆ ವಾಲ್ಮೀಕಿ ಅವರು ಒಬ್ಬ ಶ್ರೇಷ್ಠ ಶಿಕ್ಷಣ ತಜ್ಞರು ಆಗಿದ್ದರು. ಕಾರಣ ಸರ್ಕಾರ ವಾಲ್ಮೀಕಿ ಹೆಸರನ್ನು ನೂತನ ವಿವಿಗೆ ನಾಮಕರಣ ಮಾಡುವುದರಿಂದ ಅದರ ಘನತೆ ಇನ್ನಷ್ಟು ಹೆಚ್ಚಲಿದೆ ಎಂದು ತಾಲ್ಲೂಕು ಘಟಕದ ಅಧ್ಯಕ್ಷ ಮರೆಪ್ಪ ಪ್ಯಾಟಿ ಶಿರವಾಳ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ವಾಲ್ಮೀಕಿ ಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿ ಹಣÀಮಂತರಾಯ ದೊರೆ ಟೋಕಾಪುರ, ಶೇಖರ ದೊರೆ ಕಕ್ಕಸಗೇರಾ, ರಾಘವೇಂದ್ರ ಯಕ್ಷಿಂತಿ ಹಳಿಸಗರ ಇತರರಿದ್ದರು.