ಪ್ರಮುಖ ಸುದ್ದಿ
ಬೀದರ DC ಗೂ ಕೊರೊನಾ ಪಾಸಿಟಿವ್ ದೃಢ.!
ಬೀದರ DC ಗೂ ಕೊರೊನಾ ಪಾಸಿಟಿವ್ ದೃಢ.!
ಬೀದರಃ ಕೊರೊನಾ ವೈರಸ್ ಲಕ್ಷಣಗಳು ಕಂಡು ಬಂದಿರುವ ಹಿನ್ನೆಲೆ ಇಲ್ಲಿನ ಜಿಲ್ಲಾಧಿಕಾರಿ ರಾಮಚಂದ್ರನ್ .ಆರ್. ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು, ವರದಿಯಲ್ಲಿ ಕೊರೊನಾ ಪಾಸಿಟಿವ್ ದೃಢವಾಗಿದೆ.
ಇಲ್ಲಿನ ಬ್ರಿಮ್ಸ್ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ಪ್ರಸ್ತುತ ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ. ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.