ಪ್ರಮುಖ ಸುದ್ದಿ

ಯಾದಗಿರಿಃ 4 ಕಡೆ ಕೊರೊನಾ ಪರೀಕ್ಷಾ ಕೇಂದ್ರ ಸ್ಥಾಪನೆ

ಶಹಾಪುರ ಬಸ್ ನಿಲ್ದಾಣದಲ್ಲೂ ಕೋವಿಡ್ ಪರೀಕ್ಷಾ ಕೇಂದ್ರ

ಯಾದಗಿರಿಃ ಕಳೆದ ಒಂದು ವಾರದಿಂದ ಕೋವಿಡ್-19 ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಯಾದಗಿರಿ ಜಿಲ್ಲೆಯ ಹಲವಡೆ ತಪಾಸಣೆಗಾಗಿ 4 ಕೋವಿಡ್ ಪರೀಕ್ಷಾ ತಂಡಗಳನ್ನು ರಚಿಸಿದ್ದು, ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ತಿಳಿಸಿದ್ದಾರೆ.

ಯಾದಗಿರಿ ನಗರದ ಹೊಸ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸುರಪುರ ಬಸ್ ನಿಲ್ದಾಣ, ಶಹಾಪುರ ಬಸ್ ನಿಲ್ದಾಣ ಗಳಲ್ಲಿ ತಪಾಸಣೆಗಾಗಿ ಕೋವಿಡ್ ಪರೀಕ್ಷಾ ತಂಡಗಳ ವ್ಯವಸ್ಥೆ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಆಯಾ ರಾಜ್ಯಗಳಿಂದ ಜಿಲ್ಲೆಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಕಳೆದ 72 ಗಂಟೆಯಲ್ಲಿ ಪಡೆದ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ತೋರಿಸಿದರೆ ಮಾತ್ರ ಗಡಿಯಲ್ಲಿ ಪ್ರವೇಶ ನೀಡಲಾಗುವುದು. ದೇಶದ ಮಹಾರಾಷ್ಟ್ರ, ಕೇರಳ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿವೆ. ಜಿಲ್ಲೆಯ ಜನರ ಆರೋಗ್ಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಉಳಿದಂತೆ ಕೋವಿಡ್ ಸೋಂಕು ನಿಯಂತ್ರಣಕ್ಕೆ ಎಂದಿನಂತೆ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅವಶ್ಯವಾಗಿದ್ದು, ಜಿಲ್ಲಾಡಳಿತದ ಕ್ರಮಕ್ಕೆ ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button