ಪ್ರಮುಖ ಸುದ್ದಿ
ಕಕ ಅಭಿವೃದ್ಧಿಗೆ ಹೆಚ್ಚುವರಿ 1500 ಕೋಟಿ – ಸಿಎಂ ಬೊಮ್ಮಾಯಿ ಘೋಷಣೆ
ಕಕ ಅಭಿವೃದ್ಧಿಗೆ ಹೆಚ್ಚುವರಿ 1500 ಕೋಟಿ – ಸಿಎಂ ಬೊಮ್ಮಾಯಿ ಘೋಷಣೆ
ಕಲ್ಬುರ್ಗಿಃ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಬದ್ಧನಾಗಿದ್ದು, ಈಗಾಗಲೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ 1500 ಕೋಟಿ ನೀಡಲಾಗಿದೆ. ಇದಲ್ಲದೆ ಮತ್ತೆ 1500 ಕೋಟಿ ಹೆಚ್ಚಿನ ಅನುದಾನ ನೀಡಲಾಗುವದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ನಗರದ ಸರ್ದಾರ ವಲ್ಲಭಬಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಈಗಾಗಲೇ ಬಿಡುಗಡೆಗೊಳಿಸಲಾಗಿದ್ದ 1500 ಕೋಟಿ ಅನುದಾನ ಸಂಪೂರ್ಣ ಖರ್ಚು ಮಾಡಿದ ನಂತರ ಮತ್ತೆ 1500 ಕೋಟಿ ಅನುದಾನ ನೀಡಲಾಗುವದು ಎಂದ ಅವರು, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸದಾ ಬದ್ಧನಾಗಿದ್ದು, ಸಮರ್ಪಕ ಅಭಿವೃದ್ಧಿ ಕಾರ್ಯಗಳು ನಡೆಯಲಿ. ಬೇಕಾದ ಸಹಾಯ ಸಹಕಾರ ನೀಡಲಾಗುವದು ಎಂದರು.