ಪ್ರಮುಖ ಸುದ್ದಿ
ಸಿಂದಗಿ, ಹಾನಗಲ್ ಉಪ ಚುನಾವಣೆ ಘೋಷಣೆ – ಸವಿವರ
ಸಿಂದಗಿ, ಹಾನಗಲ್ ಉಪ ಚುನಾವಣೆ ಘೋಷಣೆ – ಸವಿವರ
ಬೆಂಗಳೂರಃ ರಾಜ್ಯದ ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣೆ ಆಯೋಗ ಘೋಷಣೆ ಮಾಡಿದೆ.
ಅ.30 ರಂದು ಈ ಎರಡು ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅ.1 ರಿಂದ ಅಧಿಸೂಚನೆ ಪ್ರಕಟವಾಗಲಿದೆ.
ಅ.8 ರಂದು ನಾಮ ಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಅ.11 ರಂದು ನಾಮಪತ್ರ ಹಿಂಪಡೆಯುವ ಕೊನೆಯ ದಿನವಾಗಿದ್ದು, ಅ.30 ರಂದು ಮತದಾನ ನಡೆಯಲಿದೆ. ನ.2 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಆಯೋಗ ತಿಳಿಸಿದೆ.
ಎರಡು ಕ್ಷೇತ್ರಗಳ ಶಾಸಕರು ಮೃತಪಟ್ಟ ಹಿನ್ನೆಲೆ ಉಪ ಚುನಾವಣೆ ಮೂಹೂರ್ತ ನಿಗದಿ ಪಡಿಸಲಾಗಿದೆ.