ಪರಿಶಿಷ್ಟ ಜಾತಿ, ಪಂಗಡದ SSLC ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ
ಪರಿಶಿಷ್ಟ ಜಾತಿ, ಪಂಗಡದ SSLC ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ
ಬೆಂಗಳೂರಃ ಎಸ್ಸೆಸ್ಸೆಲ್ಸಿಯಲ್ಲಿ ಶೇ.60 ರಷ್ಟು ಅಂಕ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 2000 ರೂ. ಮತ್ತು ಶೇ.75 ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ತಲಾ 15000 ರೂ. ಪ್ರೋತ್ಸಾಹ ಧನ ವಿತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾರನಾಡಿದ ಅವರು, ಎಸ್ಸೆಸ್ಸೆಲ್ಸಿಯಲ್ಲಿ ಶೇ.60 ಮತ್ತು ಶೇ.75 ಕ್ಕಿಂತ ಹೆಚ್ಚು ಅಂಕ ಪಡೆದ ಪಶಿನ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಕುರಿತು ಎಷ್ಟು ನೀಡಬೇಕೆಂಬುದು ಅಮಸ್ಯೆ ಉಂಟಾಗಿತ್ತು ಇದೀಗ ಅದನ್ನು ಪರಿಹರಿಸಲಾಗಿದೆ.
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆಗಾಗಿ ಈಗಾಗಲೇ 51 ಕೋಟಿ ಅನುದಾನ ನೀಡಲಾಗಿದೆ. ಅಲ್ಲದೆ ಇಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸುಗಳಿಗೆ ಆಡಳಿತ ಮಂಡಳಿ ಕೋಟಾದಡಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಪಾವತಿಸಲು ಆದೇಶಿಸಿದ್ದೇನೆ ಎಂದು ಮಾಹಿತಿ ನೀಡಿದರು.