NTPC Recruitment 2024: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ನೇಮಕಾತಿ- ಈ ಹುದ್ದೆಗಳ ಭರ್ತಿ
NTPC Recruitment 2024: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (National Thermal Power Corporation Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 26 ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮೇ 12, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್(Online) ಮೂಲಕ ಅಪ್ಲೈ ಮಾಡಬೇಕು. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವವರು ಈ ಅವಕಾಶವನ್ನು ಬಳಸಿಕೊಳ್ಳಿ.
ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ವಿದ್ಯಾರ್ಹತೆ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CA ಅಥವಾ ICWA, CA(ಇಂಟರ್) ಅಥವಾ ICWA (ಇಂಟರ್) ಪೂರ್ಣಗೊಳಿಸಿರಬೇಕು.
ವಯೋಮಿತಿ ಸಡಿಲಿಕೆ:
ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65ರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವೇತನ ನಿಗದಿಪಡಿಸಿಲ್ಲ. ಅವರ ಅನುಭವ ಮತ್ತು ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
ಆನ್ಲೈನ್ ಮೂಲಕ ಅರ್ಜಿ ಹಾಕಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 07/05/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 12, 2024