Homeಜನಮನವಿನಯ ವಿಶೇಷ
ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನ
ಬಿಹಾರ: ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ(72) ಅವರು ನಿಧನರಾಗಿದ್ದಾರೆ.
ಬಿಜೆಪಿಯ ಹಿರಿಯ ನಾಯಕ ಸುಶೀಲ್ ಮೋದಿ ಅವರ ಸಾವಿನ ಸುದ್ದಿಯನ್ನು ಬಿಹಾರದ ಹಾಲಿ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. “ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ, ಇದು ಬಿಹಾರ ಬಿಜೆಪಿಗೆ ತುಂಬಲಾರದ ನಷ್ಟ” ಎಂದು ಬರೆದುಕೊಂಡಿದ್ದಾರೆ.
ಸುಶೀಲ್ ಮೋದಿ ಅವರು ಕಳೆದ ಆರು ತಿಂಗಳಿನಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು.