Homeಪ್ರಮುಖ ಸುದ್ದಿ

ಅಪಹರಣ ಪ್ರಕರಣ: ಶಾಸಕ ಹೆಚ್​ಡಿ ರೇವಣ್ಣ ಜೈಲಿಂದ ಬಿಡುಗಡೆ

ಬೆಂಗಳೂರು: ಸಂತ್ರಸ್ತೆ ಅಪಹರಣ ಆರೋಪದ ಮೇಲೆ ಜೈಲು ಸೇರಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಸೋಮವಾರ (ಮೇ. 13) ಷರತ್ತು ಬದ್ಧ ಜಾಮೀನು ಮಂಜೂರು ಆಗಿದ್ದು, ಇಂದು (ಮೇ 14) ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಹೆಚ್​ಡಿ ರೇವಣ್ಣ ಅವರು ಮಂಗಳವಾರ ಬಿಡುಗಡೆಯಾಗುತ್ತಾರೆ ಎಂಬ ವಿಚಾರ ತಿಳಿದಿದ್ದ ಅವರ ಬೆಂಬಲಿಗರು ಮತ್ತು ನೂರಾರು ಜೆಡಿಎಸ್​ ಕಾರ್ಯಕರ್ತರು ಪರಪ್ಪನ ಅಗ್ರಹಾರ ಕಾರಾಗೃಹದ ಮುಂದೆ ಜಮಾಯಿಸಿದ್ದರು. ಹೆಚ್​ಡಿ ರೇವಣ್ಣ ಅವರು ಬಿಡುಗಡೆಯಾಗುತ್ತಿದ್ದಂತೆ, ಅವರ ಅಭಿಮಾನಿಗಳು ಜಯ ಘೋಷಣೆ ಹಾಕಿ ಸಂಭ್ರಮಿಸಿದರು.

ಕಾರಾಗೃಹದ ಮುಂದೆ ಸೇರಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದರು.

Related Articles

Leave a Reply

Your email address will not be published. Required fields are marked *

Back to top button