Homeಪ್ರಮುಖ ಸುದ್ದಿಮಹಿಳಾ ವಾಣಿ

ಗರಿ ಗರಿಯಾದ ಪನೀರ್ ಪಕೋಡಾ ಮಾಡುವ ವಿಧಾನ

ಬೇಕಾಗುವ ಪದಾರ್ಥಗಳು…

ಪನೀರ್ ಕ್ಯೂಬ್ಸ್ – 500 ಗ್ರಾಂ
ಕಡ್ಲೆ ಹಿಟ್ಟು – 1 ಬಟ್ಟಲು
ಕಾರ್ನ್ ಫ್ಲೋರ್- 3-4 ಚಮಚ
ಅಚ್ಚಖಾರದ ಪುಡಿ – 1 ಚಮಚ
ಅರಶಿಣದ ಪುಡಿ– 1 ಚಮಚ
ಉಪ್ಪು – ರುಚಿಗೆ ತಕ್ಕಷ್ಟು
ಜೀರಿಗೆ ಪುಡಿ – ಅರ್ಧ ಚಮಚ
ಅಡುಗೆ ಸೋಡಾ – 1 ಚಮಚ
ಎಣ್ಣೆ – ಅಗತ್ಯಕ್ಕೆ ತಕ್ಕಷ್ಟು
ಚಾಟ್ ಮಸಾಲ – ಸ್ವಲ್ಪ

ಮಾಡುವ ವಿಧಾನ…

ಮೊದಲಿಗೆ ಒಂದು ಪಾತ್ರೆಯಲ್ಲಿ ಕಡ್ಲೆಹಿಟ್ಟು ಹಾಗೂ ಕಾರ್ನ್ ಫ್ಲೋರ್ ಹಾಕಿಕೊಂಡು ಅದಕ್ಕೆ ನೀರು, ಅಚ್ಚಖಾರದ ಪುಡಿ, ಜೀರಿಗೆ ಪುಡಿ, ಉಪ್ಪು, ಅರಶಿಣ ಮತ್ತು ಸೋಡಾ ಹಾಕಿಕೊಂಡು ಚನ್ನಾಗಿ ಮಿಕ್ಸ್ ಮಾಡಿಕೊಂಡು ದಪ್ಪ ಮಿಶ್ರಣವನ್ನು ಮಾಡಿಕೊಳ್ಳಿ.
ಇದೀಗ ಪನೀರ್ ಕ್ಯೂಬ್ಸ್ ಅನ್ನು ಹಾಕಿ, ಈ ಮಿಶ್ರಣದಲ್ಲಿ ಚನ್ನಾಗಿ ಅದ್ದಿ ಮಿಶ್ರಣದೊಂದಿಗೆ ಪನೀರ್ ಚನ್ನಾಗಿ ಹೊಂದಿಕೊಳ್ಳುವಂತೆ ಕೋಟಿಂಗ್ ಮಾಡಿ.
ಬಳಿಕ ಒಂದು ಬಾಣಾಲೆಯಲ್ಲಿ ಸ್ವಲ್ಪ ಎಣ್ಣೆ ಬಿಸಿಗಿಟ್ಟು, ಕಾದ ಬಳಿಕ ಅದಕ್ಕೆ ಕಡ್ಲೆಹಿಟ್ಟಿನ ಮಿಶ್ರಣದಲ್ಲಿ ಅದ್ದಿದ ಪನೀರ್ ಕ್ಯೂಬ್ಸ್ ಅನ್ನು ಹಾಕಿಕೊಂಡು ಚನ್ನಾಗಿ ಫ್ರೈ ಮಾಡಿಕೊಳ್ಳಿ. ಅದೇ ರೀತಿ ಎಲ್ಲಾ ಪನೀರ್ ಕ್ಯೂಬ್ಸ್‌ಗಳನ್ನು ಫ್ರೈ ಮಾಡಿ.
ನಂತರ ಅದನ್ನು ಎಣ್ಣೆಯಿಂದ ತೆಗೆದು ಅದರ ಮೇಲೆ ಸ್ವಲ್ಪ ಚಾಟ್ ಮಸಾಲ ಪುಡಿಯನ್ನು ಹಾಕಿಕೊಂಡು ಕೆಚಪ್ ಅಥವಾ ಗ್ರೀನ್ ಚಟ್ನಿಯೊಂದಿಗೆ ಸವಿಯಿರಿ.

Related Articles

Leave a Reply

Your email address will not be published. Required fields are marked *

Back to top button