Homeಪ್ರಮುಖ ಸುದ್ದಿ
ಇರಾನ್ನ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊಹಮ್ಮದ್ ಮೊಖ್ಬರ್
ಟೆಹ್ರಾನ್: ಹೆಲಿಕಾಪ್ಟರ್ ಪತನದಿಂದಾಗಿ ಮೃತಪಟ್ಟ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರ ಬಳಿಕ ಇರಾನ್ ನಲ್ಲಿ ಆಡಳಿತ ಚುಕ್ಕಾಣಿಯನ್ನು ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಇರಾನ್ ಸಂವಿಧಾನದ ಅನುಸಾರ ಅಧ್ಯಕ್ಷರು ಸಾವನ್ನಪ್ಪಿದರೆ, ಅವರ ಬಳಿಕ ಉಪಾಧ್ಯಕ್ಷರು ಅಧಿಕಾರ ವಹಿಸಿಕೊಳ್ಳುತ್ತಾರೆ. ಇದೀಗ ಹೆಲಿಕಾಪ್ಟರ್ ದುರ್ಘಟನೆಯಲ್ಲಿ ಮೃತಪಟ್ಟ ಬಳಿಕ ಉಪಾಧ್ಯಕ್ಷರಾಗಿದ್ದ ಮೊಹಮ್ಮದ್ ಮೊಖ್ಬರ್ ಅವರು ಅಧ್ಯಕ್ಷರಾಗಿ ಮುಂದುವರೆಯಲಿದ್ದು, ಇರಾನ್ ನಲ್ಲಿ ಆಡಳಿತ ನಡೆಸಲಿದ್ದಾರೆ ಎನ್ನಲಾಗಿದೆ.
ಇಬ್ರಾಹಿಂ ರೈಸಿ ಅವರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದ ಉಪಾಧ್ಯಕ್ಷ ಮೊಹಮ್ಮದ್ ಮೊಖ್ಬರ್ ಅವರು, ಆಡಳಿತದಲ್ಲಿ ಉತ್ತಮ ಕೆಲಸವನ್ನು ಮಾಡಿದ್ದಾರೆ. ಜೊತೆಗೆ ಉತ್ತಮ ರಾಜಕೀಯ ಅನುಭವವನ್ನು ಸಹ ಹೊಂದಿರುತ್ತಾರೆ. ಈ ಹಿಂದೆ ಸರ್ಕಾರಿ ಸ್ವಾಮ್ಯದ ಸೆಟಾಡ್ನ ಮುಖ್ಯಸ್ಥದ್ದ ಅವರು, ಅಂತರರಾಷ್ಟ್ರೀಯ ಕಾನೂನು ಮತ್ತು ನಿರ್ವಹಣೆಯಲ್ಲಿ ಉನ್ನತ ಪದವಿಗಳನ್ನು ಗಳಿಸಿರುತ್ತಾರೆ.