ಮುಂದಿನ 5 ದಿನ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ..!
ಬೆಂಗಳೂರು:- ಮುಂದಿನ 5 ದಿನ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಯಾದಗಿರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ನಾರಾಯಣಪುರ, ಹುಣಸಗಿ, ಇಳಕಲ್, ಕೆಂಭಾವಿ, ಕಕ್ಕೇರಿ, ತಾವರಗೇರಾ, ಶೋರಾಪುರ, ತಾಳಿಕೋಟೆ, ಬೇವೂರು, ಕುಷ್ಟಗಿ, ಲಿಂಗಸುಗೂರು, ವಿಜಯಪುರ, ರಾಯಚೂರು, ಜಾಲಹಳ್ಳಿಯಲ್ಲಿ ಮಳೆಯಾಗಿದೆ. ಮುನಿರಾಬಾದ್, ದೇವದುರ್ಗ, ಬೆಳ್ಳಟ್ಟಿ, ಮಂಠಾಳ, ಸೇಡಬಾಳ, ಕುಕನೂರು, ಮಾನ್ವಿ, ದಾವಣಗೆರೆ, ಹೊಸಪೇಟೆ, ಹರಪನಹಳ್ಳಿ, ಹಡಗಲಿ, ಹಗರಿಬೊಮ್ಮನಹಳ್ಳಿ, ಕಂಪ್ಲಿ, ದಾವಣಗೆರೆಯಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್ಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.