Homeಪ್ರಮುಖ ಸುದ್ದಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌ :‌ 1,500 ಪೊಲೀಸ್‌ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ 1,500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.

ರಾಜ್ಯ ಸರ್ಕಾರವು ಪೊಲೀಸ್‌ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದ್ದು, ಪೊಲೀಸ್ ಇಲಾಖೆಯ ಕೆಎಸ್​ಆರ್​ಪಿ (KSRP), ʻಆರ್​ಪಿಸಿ (RPC) ವಿಭಾಗದಲ್ಲಿ ಖಾಲಿ ಇರುವ 1,500 ಹುದ್ದೆಗಳ ನೇರ ನೇಮಕಾತಿ ನಡೆಯಲಿದೆ.

ಕೆಎಸ್​ಆರ್​ಪಿ, ಆರ್​ಪಿಸಿ (ಪುರುಷ, ಮಹಿಳೆ) 1500 ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಹುದ್ದೆಗಳ ಪೈಕಿ ಕ್ರೀಡಾ ಪಟುಗಳಿಗೆ ಶೇ. 2, ಕಲ್ಯಾಣ ಕರ್ನಾಟಕೇತರ ಒಟ್ಟು 30 ಹುದ್ದೆಗಳು ಮೀಸಲಿಡಲಾಗಿದೆ, ಸಿಆರ್​ಪಿಸಿ (CRPC) ಕಲ್ಯಾಣ ಕರ್ನಾಟಕ 614 ಹುದ್ದೆಗಳಲ್ಲಿ ಕ್ರೀಡಾಪಟುಗಳಿಗೆ ಶೇ.2 ರಷ್ಟು ಮೀಸಲಾತಿಯಂತೆ 12 ಹುದ್ದೆಗಳು ಮೀಸಲಿಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button