Homeಪ್ರಮುಖ ಸುದ್ದಿ
ರಾಜ್ಯದ ಇತಿಹಾಸದಲ್ಲೇ ಮೊದಲು: ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ; ಸೆಕ್ಷನ್ ಜಾರಿ
ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಒಂದು ಪೊಲೀಸ್ ಠಾಣೆಯನ್ನು ಶಾಮಿಯಾನದಿಂದ ಮುಚ್ಚಿದ ಘಟನೆ ನಡೆದಿದೆ.
ಹೌದು, ಚಿತ್ರದುರ್ಗದ ರೇಣುಕಾಸ್ಟಾಮಿ ಕೊಲೆಗಡುಕರು ಇರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಶಾಮಿಯಾನ ಹೊದಿಸುವಂತೆ ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ಕೊಟ್ಟಿದ್ದಾರೆ. ಅದರಂತೆ ಠಾಣೆಯ ಸುತ್ತ ಸೈಡ್ ವಾಲ್ ಗಳನ್ನ ಕಟ್ಟಿ, ಆರೋಪಿಗಳು ಕಾಣದಂತೆ ಮಾಡಲಾಗಿದೆ. ಸದ್ಯ ಆಯುಕ್ತರು ಕೂಡ ಪೊಲೀಸ್ ಠಾಣೆಯಲ್ಲಿಯೇ ಇದ್ದಾರೆ. ಜೊತೆಗೆ ಠಾಣೆಯ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.