BEML Jobs: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ನಲ್ಲಿ ಭರ್ಜರಿ ಉದ್ಯೋಗಾವಕಾಶ
BEML Recruitment 2024: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್(Bharat Earth Movers Limited-BEML) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಅಸಿಸ್ಟೆಂಟ್ ಮ್ಯಾನೇಜರ್ & ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಜೂನ್ 29, 2024ರಂದು ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು, ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಶೈಕ್ಷಣಿಕ ಅರ್ಹತೆ:
BEML ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ/ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.
ವಯೋಮಿತಿ:
BEML ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅಸಿಸ್ಟೆಂಟ್ ಮ್ಯಾನೇಜರ್- ಗರಿಷ್ಠ 30 ವರ್ಷ
ಆಫೀಸರ್ – ಗರಿಷ್ಠ ₹ 27 ವರ್ಷ
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 3 ವರ್ಷಗಳು
SC, ST ಅಭ್ಯರ್ಥಿಗಳು: 5 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು
ವೇತನ:
ಅಸಿಸ್ಟೆಂಟ್ ಮ್ಯಾನೇಜರ್ -ಮಾಸಿಕ ₹ 50,000-1,60,000
ಆಫೀಸರ್ -ಮಾಸಿಕ ₹ 40,000-1,40,000
ಉದ್ಯೋಗದ ಸ್ಥಳ:
ನವದೆಹಲಿ
ಕೇರಳದ ಪಲಕ್ಕಾಡ್
ಬೆಂಗಳೂರು
ಮೈಸೂರು
ಸಂದರ್ಶನ ನಡೆಯುವ ಸ್ಥಳ:
BEML ಸೌಧ 23/1
4ನೇ ಮುಖ್ಯ
SR ನಗರ
ಬೆಂಗಳೂರು-560027
ನೋಟಿಫಿಕೇಶನ್ ಬಿಡುಗಡೆಯಾದ ದಿನಾಂಕ: 05/06/2024
ಸಂದರ್ಶನ ನಡೆಯುವ ದಿನ: ಜೂನ್ 29, 2024