5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ
ರಾಜ್ಯದಲ್ಲಿ ಕಳೆದ ವರ್ಷ ಮಳೆ ಕೈ ಕೊಟ್ಟ ಕಾರಣ ಬರ ಆವರಿಸಿತ್ತು. ಈ ಕಾರಣದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ರೈತರ ಖಾತೆಗೆ ಬರ ಪರಿಹಾರದ ಹಣ ನೆರವಾಗಿ ರೈತರ ಖಾತೆಗೆ ಜಮಾ ಮಾಡುತ್ತಿದ್ದು, ಬಾಕಿ ಉಳಿದ ಹಣ ಕೂಡ ರೈತರಿಗೆ ಜಮಾ ಮಾಡುವ ಕೆಲಸ ನಡೆಯುತ್ತಿದೆ. ರಾಜ್ಯದಲ್ಲಿ 35 ಲಕ್ಷ ರೈತರ ಖಾತೆಗೆ ನೆರವಾಗಿ ಹಣ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯದಲ್ಲಿ ತೀವ್ರ ಬರ ಹಿನ್ನೆಲೆ ಅರ್ಹ 35 ಲಕ್ಷ ರೈತರ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಬಾಕಿ ಉಳಿದ ರೈತರಿಗೆ ಈ ವಾರ ಜಮಾ:
ಇನ್ನು ಬಾಕ ಇರುವ 5 ಲಕ್ಷ ರೈತರಿಗೆ ಬರಪರಿಹಾರದ ಹಣವನ್ನು ಈ ವಾರದಲ್ಲಿ ವಿತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ಹೋರಾಟ ಮಾಡಿದ ನಂತರ ಕೇಂದ್ರ ಸರ್ಕಾರ 3454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯಕ್ಕೆ ಹೆಚ್ಚುವರಿ ಬರ ಪರಿಹಾರ ನೀಡಿಲ್ಲ. ವಾರದಲ್ಲಿ ಬಾಕಿ ಇರುವ ರೈತರ ಖಾತೆಗಳಿಗೆ ಬರ ಪರಿಹಾರ ಮೊತ್ತ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.